ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ರಣದೀಪ್ ಸಿಂಗ್ ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಗೆ ಕೋವಿಡ್ ದೃಢ - BC Suddi
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ರಣದೀಪ್ ಸಿಂಗ್ ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಗೆ ಕೋವಿಡ್ ದೃಢ

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ರಣದೀಪ್ ಸಿಂಗ್ ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಗೆ ಕೋವಿಡ್ ದೃಢ

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಶಿರೋಮಣಿ ಅಕಾಲಿ ದಳ ನಾಯಕಿ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೆ ಕೋವಿಡ್ ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುರ್ಜೇವಾಲಾ, ‘ನನಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಕಳೆದ ಐದು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸಕ್ಕೆ ಒಳಗಾಗಿ ಮತ್ತು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ’ ಎಂದು ಅವರು ಮನವಿ ಮಾಡಿದ್ದಾರೆ.

ಇನ್ನೊಂದೆಡೆ ಕೇಂದ್ರದ ಮಾಜಿ ಸಚಿವೆ ಹರ್ಸಿಮ್ರತ್ ಕೌರ್ ಅವರು ಕೂಡ ತನಗೆ ಕೋವಿಡ್ ತಗುಲಿರುವುದಾಗಿ ಹೇಳಿದ್ದಾರೆ.
‘ನಾನು ಮನೆಯಲ್ಲೇ ಪ್ರತ್ಯೇಕವಾಗಿದ್ದೇನೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ’ ಎಂದು ಹರ್ ಸಿಮ್ರತ್ ಕೌರ್ ಕೋರಿದ್ದಾರೆ.

‘ರಾಜ್ಯದಲ್ಲಿ ಏ.20ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ’ – ಸಿಎಂ ಯಡಿಯೂರಪ್ಪ