ನವದೆಹಲಿ: ಕೊರೋನಾ ಸೋಂಕು ಎರಡನೇ ಅಲೆ ಹೆಚ್ಚಾಗಿದ್ದು, ಕೋವಿಡ್-19 ಲಸಿಕೆ 18 ವರ್ಷದ ಮೇಲ್ಪಟ್ಟವರಿಗೂ ತೆಗೆದುಕೊಳ್ಳುವುದಕ್ಕೆ ಅನುಮತಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ) ಪತ್ರ ಬರೆದು ಮನವಿ ಮಾಡಿದೆ. ಏ.06 ರಂದು ಐಎಂಎ ಪತ್ರ ಬರೆದಿದ್ದು, 45 ವರ್ಷಗಳ ಮೇಲ್ಪಟ್ಟ ಎಲ್ಲರಿಗೂ ಈಗ ಲಸಿಕೆ ಹಾಕಿಸಲಾಗುತ್ತಿದೆ.
ಈಗ ಎರಡನೇ ಅಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆ ತೆಗೆದುಕೊಳ್ಳುವುದಕ್ಕೆ ಅನುಮತಿ ನೀಡಬೇಕೆಂದು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಖಾಸಗಿ ಕ್ಷೇತ್ರದ ಕುಟುಂಬ ಕ್ಲಿನಿಕ್ ಗಳನ್ನೂ ಲಸಿಕೆ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಐಎಂಎ ಸಲಹೆ ನೀಡಿದೆ .