ಇಂದು ರಾಜ್ಯದಲ್ಲಿ 48,781 ಜನರಿಗೆ ಕೋವಿಡ್ ಸೋಂಕು, 592 ಬಲಿ - BC Suddi
ಇಂದು ರಾಜ್ಯದಲ್ಲಿ 48,781 ಜನರಿಗೆ ಕೋವಿಡ್ ಸೋಂಕು, 592 ಬಲಿ

ಇಂದು ರಾಜ್ಯದಲ್ಲಿ 48,781 ಜನರಿಗೆ ಕೋವಿಡ್ ಸೋಂಕು, 592 ಬಲಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಜೋರಾಗಿದ್ದು,ಕಳೆದ 24 ಗಂಟೆಯಲ್ಲಿ 48,781 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 592 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 18,38,885 ಜನರಿಗೆ ಸೋಂಕು ತಗುಲಿದ್ದು, 17,804 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 28,623 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,84,420ಕ್ಕೆ ಏರಿಕೆಯಾಗಿದೆ. ಇನ್ನು 5,36,641 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 21,376 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,08,462ಕ್ಕೆ ಏರಿಕೆಯಾಗಿದೆ. 11,784 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 5,58,992 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 346 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು7,491 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 3,41,978ಸಕ್ರಿಯ ಪ್ರಕರಣಗಳಿವೆ.