ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನಲ್ಲಿ 9ನೇ ದಿನವೂ ಭಾರತದ ಕ್ರೀಡಾಪಟುಗಳ ಪದಕಗಳ ಬೇಟೆ ಮುಂದುವರೆದಿದೆ. ಇಂದು ನಡೆದ 10,000 ಮೀ ಓಟದ ನಡಿಗೆಯಲ್ಲಿ ಭಾರತದ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದು, ಹೊಸದೊಂದು ದಾಖಲೆ ನಿರ್ಮಾಣ ಮಾಡಿದ್ದಾರೆ. ಇನ್ನು 3,000 ಮೀ. ವಿಭಾಗದ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಬ್ಲೆ 8:11:20 ನಿಮಿಷಗಳಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಗೆದ್ದಿದ್ದಾರೆ.
2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಮೊದಲ ಪದಕ ಗೆದ್ದಿರುವ ಭಾರತದ ಮಹಿಳಾ ಆಟಗಾರ್ತಿಯಾಗಿ ಪ್ರಿಯಾಂಕಾ ಹೊರಹೊಮ್ಮಿದ್ದಾರೆ. ಈಗಾಗಲೇ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಭಾರತದ ಮುರುಳಿ ಶ್ರೀಶಂಕರ್(ಲಾಂಗ್ಜಂಪ್), ತೇಜಸ್ವಿನ್ ಶಂಕರ್(ಹೈಂಜಪ್) ಪದಕ ಗೆದ್ದಿದ್ದಾರೆ. ಆದರೆ, ಪ್ರಿಯಾಂಕಾ ಗೋಸ್ವಾಮಿ ಇದೀಗ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಮಹಿಳೆಯರ 10,000 ಮೀಟರ್ ನಡಿಗೆಯನ್ನು ಪ್ರಿಯಾಂಕಾ ಕೇವಲ 49 ನಿಮಿಷ, 38 ಸೆಕೆಂಡ್ಗಳಲ್ಲಿ ಪೂರ್ಣಗೊಳಿಸಿದ್ದಾರೆ. ಜೊತೆಗೆ ಕಾಮನ್ವೆಲ್ತ್ ಗೇಮ್ಸ್ನ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ 3 ಸಾವಿರ ಮೀಟರ್ ಸ್ಟೀಪಲ್ ಚೇಸ್ ಫೈನಲ್ನಲ್ಲಿ ಭಾರತದ ಅವಿನಾಶ್ ಮುಕುಂದ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.