ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ! - BC Suddi
ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ!

ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ!

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಬೆನ್ನಲ್ಲೇ ಇದೀಗ ಯುವತಿಯದ್ದು ಎನ್ನಲಾಗಿರುವ ಆಡಿಯೋವೊಂದು ಬಿಡುಗಡೆಯಾಗಿದ್ದು ಆಡಿಯೋದಲ್ಲಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಲಾಗಿದೆ.

ಆಡಿಯೋದಲ್ಲಿ ಯುವತಿ ಸಹೋದರ ಮತ್ತು ತಾಯಿ ಜೊತೆ ಫೋನ್ ಕಾಲ್ ನಲ್ಲಿ ಮಾತನಾಡಿರುವ ಆಡಿಯೋವೊಂದು ಬಿಡುಗಡೆಯಾಗಿದೆ. ಆಡಿಯೋದಲ್ಲಿ ಯುವತಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿರುವುದು ಮತ್ತೊಂದು ತಿರುವು ಪಡೆದುಕೊಂಡಿದೆ.

ಸಂತ್ರಸ್ತ ಯುವತಿ ಗೆಳೆಯ ಆಕಾಶ್ ಜತೆಗಿದ್ದ ವೇಳೆಯಲ್ಲಿ ಅವಳು ತನ್ನ ತಮ್ಮನ ಜೊತೆ ಮಾತನಾಡಿದ್ದಾಳೆ ಎನ್ನವ 6 ನಿಮಿಷ 59 ಸೆಕೆಂಡ್ ಗಳ ಆಡಿಯೋ ಹೊರಬಿದ್ದಿದೆ. ಈ ಆಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಆಡಿಯೋ ತುಣಕಿನಲ್ಲಿ ಮೂರು ಬಾರಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಯುವತಿಯ ತಮ್ಮ ನಿನಗೆ ಇದೆಲ್ಲಾ ಬೇಕಿತ್ತಾ. ಅವರೆಲ್ಲಾ ದೊಡ್ಡವರು ಅವರನ್ನು ಎದುರು ಹಾಕಿಕೊಳ್ಳಬೇಕಿತ್ತಾ ಎಂದು ಪ್ರಶ್ನಿಸುತ್ತಾನೆ. ಆಗ ಅದಕ್ಕೆ ಉತ್ತರಿಸಿದ ಯುವತಿ ಖುದ್ದು ಡಿಕೆ ಶಿವಕುಮಾರ್ ಮತ್ತು ಡಿಕೆಶಿ ಕಡೆಯವರೇ ಬರುತ್ತಾರೆ ಎಂದು ಹೇಳಿದ್ದಾಳೆ.

ಇದೇ ವೇಳೆ ಯುವತಿ ತಮ್ಮನಿಗೆ ನೀನು ಅಪ್ಪ, ಅಮ್ಮನನ್ನು ಚೆನ್ನಾಗಿ ನೋಡಿಕೋ. ಇದೆಲ್ಲವನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ.

error: Content is protected !!