ಬೆಂಗಳೂರು: ಹೌದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆಶಿ ಮತ್ತು ಸಂಸದ ಡಿ.ಕೆ. ಸುರೇಶ್‌ಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ಅಕ್ಟೋಬರ್ 7 ರಂದು ಡಿಕೆ ಬ್ರದರ್ಸ್‌ಗೆ ಇಡಿ ಡ್ರಿಲ್ ಮಾಡಲಿದೆ. ಇಡಿ ನೊಟೀಸ್ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದು, ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ನಡೆಯುತ್ತಿರುವಾಗಲೇ ಉದ್ದೇಶಪೂರ್ವಕವಾಗಿ ಈ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.