ಹೋಟೆಲ್‍ಗಳಲ್ಲಿ ಕೆಲಸ ಮಾಡುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಡಿಸಿ  - BC Suddi
ಹೋಟೆಲ್‍ಗಳಲ್ಲಿ ಕೆಲಸ ಮಾಡುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಡಿಸಿ 

ಹೋಟೆಲ್‍ಗಳಲ್ಲಿ ಕೆಲಸ ಮಾಡುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಡಿಸಿ 

ಚಿತ್ರದುರ್ಗ: ಕೋವಿಡ್-19 ಎರಡನೇ ಅಲೆ ಹಿನ್ನೆಯಲ್ಲಿ ಹೋಟೆಲ್‍ಗಳಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರರಿಗೂ ಮತ್ತು ಅಡುಗೆ ತಯಾರಿಕರಿಗೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೋಟೆಲ್ ಮಾಲೀಕರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಯೋಜಿಸಿದ್ದ ಹೋಟೆಲ್ ಮಾಲೀಕರ ಸಂಘದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಜಿಲ್ಲೆಗೆ ಬರುವ ಡ್ರೈವರ್ ಮತ್ತು ಕ್ಲಿನರ್, ಪ್ರವಾಸಿಗಳಿಗೆ, ಪ್ರಯಾಣಿಕರಿಗೆ ಕಡ್ಡಾಯವಾಗಿ ಸ್ಯಾನಿಟೈಸರ್, ಥಾರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಹೋಟೆಲ್ ಮುಂಭಾಗದಲ್ಲಿ ಸರ್ಕಾರದ ಎಸ್‍ಒಪಿ ಮಾರ್ಗಸೂಚಿಗಳ ಬಗ್ಗೆ ಫಲಕಗಳನ್ನು ಅಳವಡಿಸಬೇಕು ಎಂದು ತಾಕೀತು ಮಾಡಿದರು.

ಹೋಟೆಲ್‍ಗಳಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟವರಿದ್ದರೆ ಅವರಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಬೇಕು ಮತ್ತು ಕೆಲಸಗಾರರರಿಗೆ 20 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ಕೆಲಸಗಾರಿಗೆ ಕೆಮ್ಮು, ಜ್ವರ, ನೆಗಡಿ, ಇತ್ಯಾದಿ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಲು ಅನುಕೂಲ ಕಲ್ಪಿಸಿ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಹೇಳಿದರು.

ಬೇರೆ ಬೇರೆ ಜಿಲ್ಲೆ ಮತ್ತು ನೆರೆಯ ರಾಜ್ಯಗಳಿಂದ ಜಿಲ್ಲೆಯ ಹೋಟೆಲ್‍ಗಳಿಗೆ ಬರುವ ಪ್ರವಾಸಿಗರು ಮತ್ತು  ಪ್ರಯಾಣಿಕರ ಮಾಹಿತಿ ಕಡ್ಡಾಯವಾಗಿ ಸಂಗಹ್ರಹಿಸಿಟ್ಟುಕೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿವಾರ್ಹಣಾಧಿಕಾರಿ ಡಾ.ಕೆ. ನಂದಿನಿ ದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಎಲ್. ಫಾಲಾಕ್ಷ, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಕುಮಾರಸ್ವಾಮಿ, ಡಾ. ತುಳಸಿರಂಗನಾಥ್, ಡಾ. ರೇಣುಪ್ರಸಾದ್, ಡಾ. ಚಂದ್ರಶೇಖರ್ ಕಂಬಳಿಮಠ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಸೇರಿದಂತೆ ಹೋಟೆಲ್ ಮಾಲೀಕರು ಇದ್ದರು.

error: Content is protected !!