ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಅದಲು ಬದಲು - BC Suddi
ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಅದಲು ಬದಲು

ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಅದಲು ಬದಲು

ಬೆಂಗಳೂರು: ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉಸ್ತುವಾರಿ ಸಚಿವರ ಜಿಲ್ಲೆಗಳನ್ನು ಬದಲಾಯಿಸಿ ಅಸೂಚನೆ ಹೊರಡಿಸಲಿದ್ದಾರೆ. ಇದೇ ಮೊದಲ ಬಾರಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಗಳಿಗೆ ಬೇರೊಬ್ಬ ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆದಿದೆ.

ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಸಚಿವರು ಹಳೇಮೈಸೂರು ಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಿದ್ದಾರೆ.ಹಳೆ ಮೈಸೂರು ಭಾಗದ ಸಚಿವರನ್ನು ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಭಾಗಕ್ಕೆ, ಕರಾವಳಿ ಭಾಗದ ಸಚಿವರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇದೇ ಭಾಗದ ಸಚಿವರನ್ನು ಮಧ್ಯ ಕರ್ನಾಟಕ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿಗೆ ನೇಮಿಸಲಾಗುವುದು ಎಂನ ಮಾಹಿತಿ ಇದೆ.

error: Content is protected !!