ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ್ರು, ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಅಗಮಿಸಿ ನೇರ ಧರ್ಮಸ್ಥಳದ ಸನ್ನಿಧಿ ವಸತಿಗೃಹಕ್ಕೆ ತೆರಳಿದ್ರು ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ರು.
ನಂತರ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ತೆರಳಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ , ಎಮ್.ಎಲ್.ಸಿ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು