ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಧಾನಿ ನಿವಾಸಕ್ಕೆ 13ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯಾ? - BC Suddi
ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಧಾನಿ ನಿವಾಸಕ್ಕೆ 13ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯಾ?

ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಧಾನಿ ನಿವಾಸಕ್ಕೆ 13ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯಾ?

ನವದೆಹಲಿ: ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೆಂಟ್ರಲ್ ವಿಸ್ತಾ ಯೋಜನೆಯಡಿ ಪ್ರಧಾನಿಯವರ ನೂತನ ಗೃಹ ನಿರ್ಮಾಣ ಸೇರಿದಂತೆ ದೇಶದ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿರುವ ಎಲ್ಲ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಕೋವಿಡ್ ನಿಂದ ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ವಿನಿಯೋಗಿಸಬೇಕು ಎಂದು ಸಲಹೆ ನೀಡಿದ್ದಾರೆ.