ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ್ರ ಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ.! - BC Suddi
ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ್ರ ಮಂತ್ರಿ  ಡಾ.ಸಿ.ಎನ್. ಅಶ್ವತ್ಥನಾರಾಯಣ.!

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ್ರ ಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ.!

 

 

ಬೆಂಗಳೂರು: ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರು ‘ಕನಿಷ್ಠ ₹ 25 ಸಾವಿರ ವೇತನ‌ ನಿಗದಿ, ಸೇವಾ ಭದ್ರತೆ ಒದಗಿಸಬೇಕೆಂಬ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದು ಭರವಸೆ ನೀಡಿದರು.

ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳ ಜತೆ ಸೋಮವಾರ ಮಾತುಕತೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ ಅವರು, ‘ಮಾನವೀಯತೆ ಆಧಾರದಲ್ಲಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು’ ಎಂದರು.

‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ವಿಷಯವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ನಿರ್ಣಯ ಕೈಗೊಳ್ಳುವಂತೆ ಸಭಾಪತಿ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಪ್ರತಿನಿಧಿಸುವ ಪರಿಷತ್‌ ಸದಸ್ಯರು ಮನವಿ ಮಾಡಿದ್ದಾರೆ. ಹತ್ತು ವರ್ಷ ಸೇವಾವಧಿ ಪೂರೈಸಿರುವ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಿ, ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಮರು ನೇಮಕ ಮಾಡಿಕೊಳ್ಳುವುದು ಬೇಡ. ಕಾಯಂ ಆಗುವವರೆಗೂ ಬಳಸಿಕೊಳ್ಳುತ್ತಿರಬೇಕು. ಮಾಸಿಕ ಕನಿಷ್ಠ ₹ 25 ಸಾವಿರ ಗೌರವಧನ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ’ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು

error: Content is protected !!