ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ಅಸ್ಸಾಂನಲ್ಲಿ ಆಡಳಿತಾರೂಢ ಬಿಜೆಪಿಗೆ ಭರ್ಜರಿ ಮುನ್ನಡೆ - BC Suddi
ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ಅಸ್ಸಾಂನಲ್ಲಿ ಆಡಳಿತಾರೂಢ ಬಿಜೆಪಿಗೆ ಭರ್ಜರಿ ಮುನ್ನಡೆ

ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ಅಸ್ಸಾಂನಲ್ಲಿ ಆಡಳಿತಾರೂಢ ಬಿಜೆಪಿಗೆ ಭರ್ಜರಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಿ ಹೊರಬೀಳಲಿದೆ. ಈ ನಡುವೆ ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು ಮತ್ತೆ ಅಸ್ಸಾಂ ರಾಜ್ಯವನ್ನು ತನ್ನ ತೆಕ್ಕೆಗೆ ಪಡೆಯಲು ಸಿದ್ದವಾಗಿರುವಂತಿದೆ.

ಬಿಜೆಪಿ 72 ಸ್ಥಾನದಲ್ಲಿ ಕಾಂಗ್ರೆಸ್‌ 38 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಎಜೆಪಿಗೆ ಮಾತ್ರ ಭಾರೀ ಹಿನ್ನೆಡೆಯಾಗಿದೆ. ಪ್ರಸ್ತುತ ಮುನ್ನಡೆಯನ್ನೇ ಬಿಜೆಪಿ ಕಾಯ್ದುಕೊಂಡರೆ ಅಸ್ಸಾಂನಲ್ಲಿ ಮತ್ತೆ ಬಿಜೆಪಿಯೇ ಅಧಿಕಾರ ಪಡೆಯಲಿದೆ.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 64 ಸ್ಥಾನಗಳ ಅಗತ್ಯವಿದೆ. 2016ರಲ್ಲಿ ಬಿಜೆಪಿ 60 ಸ್ಥಾನ, ಕಾಂಗ್ರೆಸ್ ಪಕ್ಷ 26 ಸ್ಥಾನಗಳಲ್ಲಿ, ಎಐಯುಡಿಎಫ್ 13 ಸ್ಥಾನಗಳಲ್ಲಿ ಅಸ್ಸೊಂ ಗಣ ಪರಿಷತ್ 14, ಬಿಪಿಎಫ್ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಬಿಜೆಪಿ ಮೈತ್ರಿಕೂಟ ಅಸ್ಸಾಂನಲ್ಲಿ ಅಧಿಕಾರದ ಗದ್ದುಗೆ ಏರಿತ್ತು.

ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಇದೀಗ ಸುಪ್ರೀಂ ಕೊರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ