ಲಾಕ್ ಡೌನ್ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು.! - BC Suddi
ಲಾಕ್ ಡೌನ್ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು.!

ಲಾಕ್ ಡೌನ್ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು.!

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಕೆಲವು ವಾರಗಳಿಂದೀಚೆಗೆ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ಲಾಕ್‌ಡೌನ್ ಮಾಡುವ ಆಲೋಚನೆಯಲ್ಲಿಲ್ಲ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಲಾಕ್‌ಡೌನ್ ಮಾಡುವ ಚಿಂತನೆಯಿಲ್ಲ. ಸೋಂಕಿನ ಪ್ರಕರಣಗಳು ಹೆಚ್ಚಿರುವ ಕಡೆಯಲ್ಲಿ ಸ್ಥಳೀಯವಾಗಿ ಕಂಟೇನ್ಮೆಂಟ್ ಝೋನ್‌ಗಳನ್ನು ನಿರ್ಮಾಣ ಮಾಡಬಹುದಷ್ಟೆ ಎಂದು ಮಂಗಳವಾರ ನಡೆದ ಸಭೆಯಲ್ಲಿ ತಿಳಿಸಿದ್ದಾರೆ.

ಮಂಗಳವಾರ ವರ್ಲ್ಡ್‌ ಬ್ಯಾಂಕ್ ಗ್ರೂಪ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ ಅವರು, ದೇಶದ ಅಭಿವೃದ್ಧಿಗೆ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸುವಲ್ಲಿ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ತೆಗೆದುಕೊಂಡಿರುವ ಕ್ರಮಗಳನ್ನು ಶ್ಲಾಘಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿನ ತಡೆಗೆ ಟೆಸ್ಟ್‌-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಹಾಗೂ ಕೊರೊನಾ ನಿಯಮವಾವಳಿ ಸೇರಿದಂತೆ ಭಾರತ ಕೈಗೊಂಡಿರುವ ಕ್ರಮಗಳ ಕುರಿತು ಟ್ವೀಟ್ ಮೂಲಕ ವಿವರಿಸಿದ್ದಾರೆ.