ಧಾರವಾಡ : ನೋಡು ನೋಡುತ್ತಿದ್ದಂತೆಯೇ ಲಾರಿಯೊದಕ್ಕೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೈಪಾಸ್ ರಸ್ತೆಯ ಮನಸೂ ಕ್ರಾಸ್ ಬಳಿ ನಡೆದಿದೆ.ಬೆಳಗಾವಿಯಿಂದ ಬೆಂಗಳೂರು ಕಡೆ ಹೊರಟಿದ್ದ ಲಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಲಾರಿಯ ಡಿಸೇಲ್ ಟ್ಯಾಂಕ್ ಗೆ ಬೆಂಕಿ ತಗುಲಿ ಇಡೀ ಲಾರಿ ಬೆಂಕಿಗಾಹುತಿಯಾಗಿದೆ.ಸಂಪೂರ್ಣ ಸುಟ್ಟು ಹೋಗಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗಿಲ್ಲ.ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಏಕಾ ಏಕಿ ಲಾರಿಗೆ ಬೆಂಕಿ ಕಾಣಿಸಿಕೊಂಡಿದೆ.ಹೊತ್ತಿ ಉರಿದಿದ್ದರಿಂದ ಸ್ಥಳಿಯರು ಬೆಚ್ಚಿಬೀಳುವಂತಾಯಿತು.ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.