ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಕೊರೊನಾ ನೆಗೆಟಿವ್‌ ; ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ - BC Suddi
ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಕೊರೊನಾ ನೆಗೆಟಿವ್‌ ;  ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ

ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಕೊರೊನಾ ನೆಗೆಟಿವ್‌ ; ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಎಪ್ರಿಲ್‌ 22ರ ಗುರುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಬಿಎಸ್‌ವೈ ಅವರಿಗೆ ಉಪಚುನಾವಣಾ ಪ್ರಚಾರದ ಸಂದರ್ಭ ಜ್ವರ ಕಾಣಿಸಿಕೊಂಡಿದ್ದು, ಎಪ್ರಿಲ್‌‌ 16ರಂದು ಎಂ.ಎಸ್‌‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಪರೀಕ್ಷೆ ಬಳಿಕ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು.

ಇಂದು ಸಿಎಂ ಬಿಎಸ್‌ವೈ ಅವರ ಕೊರೊನಾ ನೆಗೆಟಿವ್‌ ರಿಪೋರ್ಟ್‌ ಕೈ ಸೇರಿದ್ದು, ಇಂದು ಮಧ್ಯಾಹ್ನ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಕೊರೊನಾ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ : ಇಂದಿನಿಂದ ಅರ್ಧ ದಿನ ಬ್ಯಾಂಕ್‌