ಬೆಂಗಳೂರಿನಿಂದ ತಮ್ಮೂರಿನತ್ತ ಹೊರಟ ಜನ : 12 ಸಾವಿರಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ - BC Suddi
ಬೆಂಗಳೂರಿನಿಂದ ತಮ್ಮೂರಿನತ್ತ ಹೊರಟ ಜನ : 12 ಸಾವಿರಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ

ಬೆಂಗಳೂರಿನಿಂದ ತಮ್ಮೂರಿನತ್ತ ಹೊರಟ ಜನ : 12 ಸಾವಿರಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ನಿಯಂತ್ರಿಸಲು ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಂಡಿದ್ದ ಕೆಲವರು ಊರು ಬಿಡೋದಕ್ಕೆ ಶುರುಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ತಮ್ಮೂರಿನತ್ತ ತೆರಳುತ್ತಿದ್ದಾರೆ.

ಬೇರೆ ಬೇರೆ ಜಿಲ್ಲೆಗಳಿಗೆ ಹೋಗುವ ಪ್ರಯಾಣಿಕರಿಗೆ ಬಸ್ ಸಮಸ್ಯೆ ಎದುರಾಗಿದೆ. ಹೀಗಾಗಿ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ 12 ಸಾವಿರಕ್ಕೂ ಹೆಚ್ಚು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ಬಸ್​ಗಳು ಬೆಂಗಳೂರಿನಿಂದ ಹೊರಗೆ ಹಾಗೂ ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಸಂಚರಿಸಲಿವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಕಟಣೆ ಹೊರಡಿಸಿದ್ದಾರೆ.

ಪಂಜಾಬ್‌ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದ ಕೆಕೆಆರ್..!