ಚಿನ್ನ ಸಾಗಣೆ‌ ಪ್ರಕರಣ : ಇಡಿ ಅಧಿಕಾರಿಗಳ ವಿರುದ್ದದ ಕೇಸು ರದ್ದು - BC Suddi
ಚಿನ್ನ ಸಾಗಣೆ‌ ಪ್ರಕರಣ : ಇಡಿ ಅಧಿಕಾರಿಗಳ ವಿರುದ್ದದ ಕೇಸು ರದ್ದು

ಚಿನ್ನ ಸಾಗಣೆ‌ ಪ್ರಕರಣ : ಇಡಿ ಅಧಿಕಾರಿಗಳ ವಿರುದ್ದದ ಕೇಸು ರದ್ದು

ತಿರುವನಂತಪುರಂ: ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೆಲವು ಸಚಿವರ ವಿರುದ್ದ ಕೇರಳ ಪೊಲೀಸ್ ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಕೇರಳ ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್‌ಗೆ ಸಿಎಂ ಪಿಣರಾಯಿ ವಿಜಯ್‌ ಅವರ ವಿರುದ್ದ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಲಾಗಿತ್ತು ಎಂದು ಆರೋಪಿಸಿಲಾಗಿತ್ತು. ಈ ಆರೋಪದ ಆಧಾರದ ಮೇಲೆ ಇಡಿ ಅಧಿಕಾರಿಗಳ ವಿರುದ್ದ ಕೇರಳ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಈ ಎಫ್‌‌ಐಆರ್‌ಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಕೇರಳ ಹೈಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು, ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಜಿ.ಅರುಣ್​ ಅವರು, ಇಬ್ಬರು ಅಧಿಕಾರಿಗಳ ಮೇಲೆ ದಾಖಲಿಸಲಾದ ಎಫ್‌ಐಆರ್‌ ಅನ್ನು ರದ್ದುಗೊಳಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು, ಚಿನ್ನಸಾಗಣಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ವಿಶೇಷ ಪಿಎಂಎಲ್‌ಎ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿತ್ತು. ಅಪರಾಧ ವಿಭಾಗ ಪೊಲೀಸರಿಗೆ ಪ್ರಕರಣಗಳಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನು ಪಿಎಂಎಲ್​ಎ ಕೋರ್ಟ್​​ಗೆ ಸೀಲ್ ಮಾಡಿದ ಕವರ್‌ನಲ್ಲಿರಿಸಿ ಸಲ್ಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.