ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(HAL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಟ್ರೇಡ್​ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ITI ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ವಿದ್ಯಾರ್ಹತೆ: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 14-23 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ: ಅಭ್ಯರ್ಥಿಗಳಿಗೆ ಒಡಿಶಾದ ಕೊರಾಪುತ್​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಉದ್ಯೋಗ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022