ಕೊರೊನಾ ಸೋಂಕಿನಿಂದ ಹೆಚ್‌ಡಿಕೆ ಗುಣಮುಖ - ಆಸ್ಪತ್ರೆಯಿಂದ ಬಿಡುಗಡೆ - BC Suddi
ಕೊರೊನಾ ಸೋಂಕಿನಿಂದ ಹೆಚ್‌ಡಿಕೆ ಗುಣಮುಖ – ಆಸ್ಪತ್ರೆಯಿಂದ ಬಿಡುಗಡೆ

ಕೊರೊನಾ ಸೋಂಕಿನಿಂದ ಹೆಚ್‌ಡಿಕೆ ಗುಣಮುಖ – ಆಸ್ಪತ್ರೆಯಿಂದ ಬಿಡುಗಡೆ

ಕೊರೊನಾ ದೃಢಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು” ಎಂದು ತಿಳಿಸಿದ್ದಾರೆ.

“ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ” ಎಂದಿದ್ದಾರೆ.

ಎಪ್ರಿಲ್‌ 17ರಂದು ಕುಮಾರಸ್ವಾಮಿ ಅವರಿಗೆ ಕೊರೊನಾ ದೃಢಪಟ್ಟಿದ್ದು, ಮಣಿಪಾಲ್‌ ಆಸ್ಪತ್ರೆಯಲ್ಲಿ ಬೆಡ್‌ ಸಿಗದ ಕಾರಣ ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರಿಗೆ ಕೊರೊನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.