ರೈತ ಹೋರಾಟಕ್ಕೆ ಬೆಂಬಲಿಸಿ ಬಿಜೆಪಿಯಿಂದ ಹೊರಬಂದ ನಾಯಕಿ.! - BC Suddi
ರೈತ ಹೋರಾಟಕ್ಕೆ ಬೆಂಬಲಿಸಿ ಬಿಜೆಪಿಯಿಂದ ಹೊರಬಂದ ನಾಯಕಿ.!

ರೈತ ಹೋರಾಟಕ್ಕೆ ಬೆಂಬಲಿಸಿ ಬಿಜೆಪಿಯಿಂದ ಹೊರಬಂದ ನಾಯಕಿ.!

ಉತ್ತರ ಪ್ರದೇಶ:  ಬಿಜೆಪಿ ನಾಯಕಿ ಪ್ರಿಯಂವದಾ ತೋಮರ್ ಅವರು ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.!

ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆಗಳು ನಡೆಯುವ ಸಂದರ್ಭದಲ್ಲಿ, ಪ್ರಿಯಂವದಾ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ‘ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿವೆ. ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಇಂಥ ರೈತ ವಿರೋಧಿ ನೀತಿಗಳನ್ನು ಹೊಂದಿರುವ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪ್ರಿಯಂವದಾ ಪತ್ರ ಬರೆದಿದ್ದಾರೆ.

error: Content is protected !!