ರೈತರ ಬೆಳೆ ವಿಮೆಗೆ ಸಂಬಂಧಿಸಿದಂತೆ ಹೈಕೋರ್ಟ್  ಸರಕಾರಕ್ಕೆ ನೀಡಿದ ನಿರ್ದೇಶನ ಏನು.? - BC Suddi
ರೈತರ ಬೆಳೆ ವಿಮೆಗೆ ಸಂಬಂಧಿಸಿದಂತೆ ಹೈಕೋರ್ಟ್  ಸರಕಾರಕ್ಕೆ ನೀಡಿದ ನಿರ್ದೇಶನ ಏನು.?

ರೈತರ ಬೆಳೆ ವಿಮೆಗೆ ಸಂಬಂಧಿಸಿದಂತೆ ಹೈಕೋರ್ಟ್  ಸರಕಾರಕ್ಕೆ ನೀಡಿದ ನಿರ್ದೇಶನ ಏನು.?

 

ಬೆಂಗಳೂರು: ಹೈಕೋರ್ಟ್ ಮಹತ್ವದ ನಿರ್ದೇಶನವನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದು ಏನಪ್ಪ ಅಂದ್ರೆ, ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಆದರೆ ಬಹಳಷ್ಟು ರೈತರಿಗೆ ಯೋಜನೆಗಳ ಅರಿವೇ ಇರುವುದಿಲ್ಲ.

ಹಾಗಾಗಿ ಬೆಳೆ ವಿಮೆ ಯೋಜನೆ ಮತ್ತು ಅದರ ಪ್ರಯೋಜನಗಳ ಕುರಿತು ರೈತರಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ರೈತರ ಆತ್ಮಹತ್ಯೆ ಮತ್ತು ಬೆಳೆ ವಿಮಾ ಯೋಜನೆ ಅನುಷ್ಠಾನದ ಕುರಿತಂತೆ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಈ ಸೂಚನೆ ನೀಡಿದೆ.

error: Content is protected !!