ಕೂಡಲೇ ಕೆಲಸಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಚಾಟಿ - BC Suddi
ಕೂಡಲೇ ಕೆಲಸಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಚಾಟಿ

ಕೂಡಲೇ ಕೆಲಸಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಮುಷ್ಕರ ನಡೆಸಲು ಇದು ಸರಿಯಾದ ಸಮಯವಲ್ಲ. ಕೂಡಲೇ ಕೆಲಸಕ್ಕೆ ಹಾಜರಾಗಿ ಎಂದು ಹೈಕೋರ್ಟ್ ರಾಜ್ಯ ಸಾರಿಗೆ ನೌಕರರಿಗೆ ಚಾಟಿ ಬೀಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಪೀಠವು “ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ” ಎಂದು ಸೂಚನೆ ನೀಡಿ ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.

ಸರ್ಕಾರದ ಪರವಾಗಿ ಹಾಜರಾಗಿದ್ದ ಎಜಿ ಪ್ರಭುಲಿಂಗ ನಾವದಗಿ, ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಕಾರ್ಮಿಕರ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದೆ. ಸಾರಿಗೆ ನೌಕರರ ಮುಷ್ಕರ ಕಾನೂನುಬಾಹಿರವೆಂದು ಘೋಷಿಸಲಾಗಿದೆ. ಕೆಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣಿಸುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ರಾಹುಲ್ ಗಾಂಧಿಗೆ ಕೊರೊನಾ ಪಾಸಿಟಿವ್