ಕರ್ನಾಟಕ ಹೈಕೋರ್ಟ್‌ನಲ್ಲಿ 19 ಹುದ್ದೆಗಳಿಗೆ ಅರ್ಜಿ ಆಹ್ವಾನ - BC Suddi
ಕರ್ನಾಟಕ ಹೈಕೋರ್ಟ್‌ನಲ್ಲಿ 19 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್‌ನಲ್ಲಿ 19 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನಲ್ಲಿ ಕಾನೂನು ಗುಮಾಸ್ತ ಮತ್ತು ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 29 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇ.50 ಅಂಕಗಳೊಂದಿಗೆ ಕಾನೂನು ಪದವಿ. ಅಭ್ಯರ್ಥಿಗಳು ರಾಜ್ಯ ವಕೀಲರ ಪರಿಷತ್‌ನಲ್ಲಿ ನೋಂದಾಯಿಸಿರಬೇಕು. ಕಂಪ್ಯೂಟರ್ ಜ್ಞಾನ ಇರಬೇಕು.

ವಯೋಮಿತಿ: 30ವರ್ಷ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ನಂತರ ವೈಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಓದಲು http://karnatakajudiciary.kar.nic.in/recruitmentNotifications/Notification-law-clerk-28042021.pdf ಗೆ ಭೇಟಿ ಮಾಡಿ.