ಪ್ರಮಾಣ ವಚನ ಸ್ವೀಕಾರ ದಿನವನ್ನು ಇಂದು ಅಥವಾ ನಾಳೆ ಪ್ರಕಟಿಸುತ್ತೇನೆ : ಎಂ.ಕೆ ಸ್ಟಾಲಿನ್‌‌ - BC Suddi
ಪ್ರಮಾಣ ವಚನ ಸ್ವೀಕಾರ ದಿನವನ್ನು ಇಂದು ಅಥವಾ ನಾಳೆ ಪ್ರಕಟಿಸುತ್ತೇನೆ : ಎಂ.ಕೆ ಸ್ಟಾಲಿನ್‌‌

ಪ್ರಮಾಣ ವಚನ ಸ್ವೀಕಾರ ದಿನವನ್ನು ಇಂದು ಅಥವಾ ನಾಳೆ ಪ್ರಕಟಿಸುತ್ತೇನೆ : ಎಂ.ಕೆ ಸ್ಟಾಲಿನ್‌‌

ಚೆನ್ನೈ: “ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದಕ್ಕೆ ತಮಿಳುನಾಡಿನ ಜನತೆ ಧನ್ಯವಾದಗಳು. ಮುಖ್ಯಮಂತ್ರಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ದಿನವನ್ನು ಇಂದು ಅಥವಾ ನಾಳೆ ಪ್ರಕಟಿಸುತ್ತೇನೆ” ಎಂದು ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಎಂಕೆ ಮೈತ್ರಿಕೂಟವನ್ನು ಗೆಲ್ಲಿಸಿದ್ದಕ್ಕಾಗಿ ಧನ್ಯವಾದಗಳು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಹಂತಹಂತವಾಗಿ ಈಡೇರಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಮಗೆ ಅಭಿನಂದನೆ ಸಲ್ಲಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ರಾಜಕೀಯ ಹಿರಿಯ ನಾಯಕ ಸಹಕಾರವನ್ನು ಬಯಸುತ್ತಿದ್ದೇನೆ. ಪಕ್ಷದ ನೂತನ ನಾಯಕರ ಸಭೆ ಕರೆದು ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್ ವಿರುದ್ಧ ಹೋರಾಡಿದ್ದ ಟೀಚರ್ ಶೈಲಜಾಗೆ ಭಾರೀ ಅಂತರದ ಗೆಲುವು