ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಸರಣಿಯಲ್ಲಿ 3-0 ಅಂತರದಿಂದ ಹೀನಾಯ ಸೋಲು ಒಪ್ಪಿಕೊಂಡ ಟೀಂ ಇಂಡಿಯಾಗೆ ದಂಡದ ಬರೆ ಬಿದ್ದಿದೆ.

ಕೇಪ್‌ಟೌನ್​ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸ್ಲೋ ಓವರ್ ರೇಟ್‌ಗಾಗಿ ಟೀಂ ಇಂಡಿಯಾಗೆ ಪಂದ್ಯದ ಶುಲ್ಕದ ಶೇ 40ರಷ್ಟು ದಂಡ ವಿಧಿಸಲಾಗಿದೆ. ನಿಗದಿತ ಅವಧಿಯೊಳಗೆ 2 ಓವರ್ ಕಡಿಮೆ ಬೌಲಿಂಗ್ ಮಾಡಿದ್ದಕ್ಕಾಗಿ ಭಾರತ ತಂಡಕ್ಕೆ ಫೈನ್ ಹಾಕಲಾಗಿದೆ.

ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ ನಿಗದಿತ ಸಮಯದೊಳಗೆ ತಂಡವು ತನ್ನ ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸದಿದ್ದರೆ ಪ್ರತಿ ಓಕ್ ಓವರ್‌ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ಅನ್ವಯಿಸಲಾಗುತ್ತದೆ. ಮೂರನೇ ಏಕದಿನ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಬೇಗನೆ ಓವರ್ ಮುಗಿಸುವುದರಲ್ಲಿ ಎಡವಿದ್ದರು. ಇದರಿಂದ ಭಾರತ ತಂಡವು ನಿಗದಿತ ಅವಧಿಯೊಳಗೆ 2 ಓವರ್ ಕಡಿಮೆ ಬೌಲಿಂಗ್ ಮಾಡಿತ್ತು. ಹೀಗಾಗಿ ಶೇ 40ರಷ್ಟು ದಂಡ ವಿಧಿಸಲಾಗಿದೆ.