ಜಾರಕಿಹೊಳಿ ಜತೆ ಸೇರಿಕೊಂಡು ಎಸ್‌ಐಟಿ ಅಧಿಕಾರಿಗಳಿಂದಲೂ ಬೆದರಿಕೆ : ಸಿ.ಡಿ ಯುವತಿಯಿಂದ ಹೈಕೋರ್ಟ್‌ ಸಿಜೆಗೆ ಪತ್ರ - BC Suddi
ಜಾರಕಿಹೊಳಿ ಜತೆ ಸೇರಿಕೊಂಡು ಎಸ್‌ಐಟಿ ಅಧಿಕಾರಿಗಳಿಂದಲೂ ಬೆದರಿಕೆ : ಸಿ.ಡಿ ಯುವತಿಯಿಂದ ಹೈಕೋರ್ಟ್‌ ಸಿಜೆಗೆ ಪತ್ರ

ಜಾರಕಿಹೊಳಿ ಜತೆ ಸೇರಿಕೊಂಡು ಎಸ್‌ಐಟಿ ಅಧಿಕಾರಿಗಳಿಂದಲೂ ಬೆದರಿಕೆ : ಸಿ.ಡಿ ಯುವತಿಯಿಂದ ಹೈಕೋರ್ಟ್‌ ಸಿಜೆಗೆ ಪತ್ರ

ಬೆಂಗಳೂರು: ಮಾಜಿ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ. ಯುವತಿಯು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಅವರಿಗೆ ಖುದ್ದಾಗಿ ತನಿಖೆಯ ಉಸ್ತುವಾರಿ ವಹಿಸಬೇಕು ಮತ್ತು ನನಗೆ ರಕ್ಷಣೆ ಮತ್ತು ನ್ಯಾಯ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಯುವತಿ ಇ ಮೇಲ್ ಮೂಲಕ ಪತ್ರ ಕಳಿಸಿದ್ದು, ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಯಾಗಬೇಕು.

ನನ್ನ ತಂದೆ ತಾಯಿಯಿಂದ ಬಲವಂತವಾಗಿ ಹೇಳಿಕೆ ಕೊಡಿಸಿಕೊಳ್ಳಲಾಗಿದೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಕೇಸ್‌ನಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಸಿಡಿ ಯುವತಿ ಮನವಿ ಮಾಡಿಕೊಂಡಿದ್ದಾರೆ.

ಇನ್ನು ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದು, ರಮೇಶ್ ಜಾರಕಿಹೊಳಿ ಜತೆ ಸೇರಿಕೊಂಡು ಎಸ್‌ಐಟಿ ಅಧಿಕಾರಿಗಳು ನನಗೂ, ನಮ್ಮ ಕುಟುಂಬಕ್ಕೂ ಯಾವುದೇ ರಕ್ಷಣೆ ನೀಡಿಲ್ಲ. ಎಸ್‌ಐಟಿ ಮುಖಾಂತರ ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದಾರೆ. ರಮೇಶ್ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುತ್ತಿದ್ದು, ಅವರು ನನಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕುತ್ತಿದ್ದು, ರಮೇಶ್ ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ನಮ್ಮನ್ನು ಕೊಲ್ಲಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಸರ್ಕಾರ ಕೂಡ್ ರಮೇಶ್‌ ಜಾರಕಿಹೊಳಿಯನ್ನು ರಕ್ಷಣೆ ಮಾಡುತ್ತಿದ್ದು, ಎಸ್‌ಐಟಿ ಹಾಗೂ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಸಿಡಿ ಲೇಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಡಿವೈಎಸ್ಪಿ ಕಟ್ಟೀಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದು, ನಮ್ಮ ಪೋಷಕರಿಂದ ಒತ್ತಡ ಹಾಕಿ ನನ್ನನ್ನ ಕಿಡ್ನ್ಯಾಪ್ ಮಾಡಿಸಿರುವುದಾಗಿ ಹೇಳಿಕೆ ನೀಡಿಸಿದ್ದಾರೆ. ಕಟ್ಟೀಮನಿ ರಮೇಶ್ ಜಾರಕಿಹೊಳಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ನ್ಯಾಯಾಲಯವು ನನ್ನ ಮನವಿಯನ್ನ ಗಂಭೀರವಾಗಿ ಪರಿಗಣಿಸಬೇಕು” ಎಂದು ಮನವಿ ಮಾಡಿಕೊಂಡಿದ್ದಾಳೆ.

ಹುಬ್ಬಳ್ಳಿಯಿಂದ ವಿಮಾನಗಳ ಆವರ್ತನವನ್ನು ಹೆಚ್ಚಿಸಿದ ಇಂಡಿಗೋ

error: Content is protected !!