ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಲಾಕ್​ಡೌನ್​ ವಿಸ್ತರಣೆ>ಕೇಜ್ರಿವಾಲ್​ ಆದೇಶ - BC Suddi
ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಲಾಕ್​ಡೌನ್​ ವಿಸ್ತರಣೆ>ಕೇಜ್ರಿವಾಲ್​ ಆದೇಶ

ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಲಾಕ್​ಡೌನ್​ ವಿಸ್ತರಣೆ>ಕೇಜ್ರಿವಾಲ್​ ಆದೇಶ

ನವದೆಹಲಿ:ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಲಾಕ್​ಡೌನ್​ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಆದೇಶ ಹೊರಡಿಸಿದ್ದಾರೆ.

ಕಳೆದ ವಾರದಿಂದ ದೆಹಲಿಯಲ್ಲಿ ಲಾಕ್​ಡೌನ್​ ವಿಧಿಸಲಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್​ಡೌನ್​ ವಿಸ್ತರಿಸಿದೆ.

ದೇಶದ ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಕೇಂದ್ರ ಮತ್ತು ರಾಜ್ಯ ತಂಡಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಆಕ್ಸಿಜನ್​ ಪೂರೈಕೆಯಲ್ಲಿ ಹಾಗೂ ಚಿಕಿತ್ಸೆಯಲ್ಲಿ ವ್ಯತ್ಯಯವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.