ಲಖನೌ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಅವರನ್ನು ಇಲ್ಲಿನ ವಿಶೇಷ ಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ. ಸ್ವಾಮಿ ಚಿನ್ಮಯಾನಂದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಿಶೇಷ ನ್ಯಾಯಾಧೀಶ ಪಿ.ಕೆ. ರೈ ಅಭಿಪ್ರಾಯಪಟ್ಟರು.
ಸ್ವಾಮಿ ಚಿನ್ಮಯಾನಂದ ಅವರಿಂದ ಹಣ ವಸೂಲಿಗಾಗಿ ಯತ್ನಿಸಿದ ಆರೋಪದಿಂದ ಕಾನೂನು ವಿದ್ಯಾರ್ಥಿನಿ, ಇತರ ಆರೋಪಿಗಳಾದ ಸಂಜಯ್ ಸಿಂಗ್, ಡಿ.ಪಿ.ಎಸ್. ರಾಠೋಡ್, ವಿಕ್ರಮ್ ಸಿಂಗ್, ಸಚಿನ್ ಸಿಂಗ್ ಹಾಗೂ ಅಜಿತ್ ಸಿಂಗ್ ಅವರನ್ನು ಸಹ ಕೋರ್ಟ್ ಖುಲಾಸೆಗೊಳಿಸಿ ಆದೇಶಿಸಿದೆ.