ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ - BC Suddi
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಎಂ.ಎ.ಹೆಗಡೆ (73) ಅವರು ರವಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ‌ ಉಸಿರಾಟದ ಸಮಸ್ಯೆಯಿಂದ ನಿಧನರಾದರು.

ಎಂ.ಎ.ಹೆಗಡೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ.

ರವಿವಾರ ಮುಂಜಾನೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಚಿಕಿತ್ಸೆಗೆ ಸ್ಪಂದಿಸಲ್ಲಿಲ್ಲ ಎಂದು ವರದಿಯಾಗಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಮಹಾಬಲೇಶ್ವರ ಹೆಗಡೆ ಅವರು ಕಲೆ, ಕಲಾವಿದರ ಉನ್ನತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ.

‘ಎಸ್‌ಎಮ್‌ಎಸ್‌ ಕ್ರಮವನ್ನು ಅನುಸರಿಸಿದ್ರೆ ಲಾಕ್‌ಡೌನ್‌‌‌‌‌‌‌‌ ಅವಶ್ಯಕತೆ ಇಲ್ಲ’ – ಸುರೇಶ್ ಕುಮಾರ್