ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪ ಮಾಡಿದ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್ - BC Suddi
 ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪ ಮಾಡಿದ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್

 ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪ ಮಾಡಿದ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್ ಮಾಡಿರುವ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪದ ಬಗ್ಗೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ಆದೇಶಿಸಿದೆ.

”ದೇಶ್‌ಮುಖ್‌ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು, ಮುಂಬೈನ ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೆಲ್ಕರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಹೇಳುವಂತೆ ಒತ್ತಡ ಹೇರುತ್ತಿದ್ದರು, ವರ್ಗಾವಣೆ ಮತ್ತು ಪೋಸ್ಟಿಂಗ್‌ ವಿಚಾರದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈಗ ಅಮಾನತುಗೊಂಡಿರುವ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಝೆ ಅವರಲ್ಲಿ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸಲು ಹೇಳಿದ್ದಾರೆ” ಎಂದು ಪರಮ್ ಬಿರ್ ಸಿಂಗ್ ಆರೋಪಿಸಿ ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಬಗ್ಗೆ ತನಿಖೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ”ಈ ಪ್ರಕರಣ ಗಂಭೀರವಾದುದು ಆದರೆ ಹೈಕೋರ್ಟ್‌ಗೆ ಹೋಗಿ” ಎಂದು ಹೇಳಿತ್ತು. ಬಳಿಕ ಪರಮ್‌ ಬೀರ್‌ ಸಿಂಗ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಗಿರೀಶ್ ಕುಲಕರ್ಣಿ ಅವರನ್ನೊಳಗೊಂಡ ವಿಭಾಗೀಯ ಪೀಠ, ”ಇದು ಸ್ವತಂತ್ರ ವಿಚಾರಣೆಗೆ ಅಗತ್ಯವಾದ ಅಸಾಧಾರಣ ಮತ್ತು ವಿಶಿಷ್ಟ ಪ್ರಕರಣ. ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು 15 ದಿನಗಳೊಳಗೆ ಪೂರ್ಣಗೊಳಿಸಿ, ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಿ” ಎಂದು ಸಿಬಿಐ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

‘1-9ನೇ ತರಗತಿ ಪರೀಕ್ಷೆ ಇಲ್ಲದೆ ಮೌಲ್ಯಾಂಕ ಆಧಾರಿಸಿ ತೇರ್ಗಡೆ ಇನ್ನೆರಡು ದಿನದಲ್ಲಿ ನಿರ್ಧಾರ’ : ಸಚಿವ ಸುರೇಶ್

error: Content is protected !!