ಮಂಗಳೂರು: ಬ್ಯಾಂಕ್, ವಿಮಾ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರಿಂದ ಮುಷ್ಕರ - BC Suddi
ಮಂಗಳೂರು: ಬ್ಯಾಂಕ್, ವಿಮಾ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರಿಂದ ಮುಷ್ಕರ

ಮಂಗಳೂರು: ಬ್ಯಾಂಕ್, ವಿಮಾ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರಿಂದ ಮುಷ್ಕರ

ಮಂಗಳೂರು : ಸಾರ್ವಜನಿಕ ರಂಗದ ಎರಡು ಬ್ಯಾಂಕ್ ಮತ್ತು ಒಂದು ವಿಮಾ ಕಂಪೆನಿಯನ್ನು ಖಾಸಗೀಕರಣಗೊಳಿಸಲು 2021ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವುದನ್ನು ಖಂಡಿಸಿ ಸಂಯುಕ್ತ ಬ್ಯಾಂಕ್ ಒಕ್ಕೂಟಗಳ ವೇದಿಕೆಯ ಕರೆಯಂತೆ ಮಂಗಳೂರಿನಲ್ಲಿ ಬ್ಯಾಂಕ್ ನೌಕರರು ಮುಷ್ಕರ ಆರಂಭಿಸಿದ್ದಾರೆ. ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸುಮಾರು 2 ಸಾವಿರಕ್ಕೂ ಅಧಿಕ ಬ್ಯಾಂಕ್ ನೌಕರರು ಇಂದಿನ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಕೆನರಾ ಬ್ಯಾಂಕ್‌ನ ನಗರದ ಬಲ್ಮಠ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಬ್ಯಾಂಕ್ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ, ಮಂಗಳೂರು ಮಿನಿ ವಿಧಾನ ಸೌಧದ ಮುಂದೆಯೂ ಧರಣಿ ನಡೆಸಿದರು.

 

error: Content is protected !!