ಮಾ.20ರಂದು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ - BC Suddi
ಮಾ.20ರಂದು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ

ಮಾ.20ರಂದು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ

ಬೆಂಗಳೂರು: ಮಾರ್ಚ್ 19ರಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ನಗರಕ್ಕೆ ಆಗಮಿಸಲಿದ್ದು, ಮಾರ್ಚ್ 20ರಂದು ಪಕ್ಷದ ಪ್ರಮುಖ ನಾಯಕರ ಸಭೆ ನಡೆಯಲಿದೆ.ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ.

ರಾಜ್ಯದಲ್ಲಿ ಪಕ್ಷದ ವಿದ್ಯಾಮಾನಗಳ ವಿಚಾರದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅರುಣ್ ಸಿಂಗ್ ಅವರು ಮಾರ್ಚ್ 19ರಂದು ಸಂಜೆ 6 ಗಂಟೆಗೆ ನಗರಕ್ಕೆ ಆಗಮಿಸಲಿದ್ದು, ಬಳಿಕ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ವೇಳೆ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗುವ ಸಾಧ್ಯತೆ ಇದೆ. ಮಾರ್ಚ್ 20ರ ಬೆಳಗ್ಗೆ 8.30ಕ್ಕೆ ಪ್ರಮುಖ ನಾಯಕರ ಜೊತೆ ಅರುಣ್ ಸಿಂಗ್ ಸಭೆ ನಡೆಸಲಿದ್ದಾರೆ. ಸಭೆಯ ಮುಗಿದ ನಂತರ ಅವರು ರಾಜಸ್ಥಾನದ ಉದಯಪುರಕ್ಕೆ ತೆರಳಿದ್ದಾರೆ.

error: Content is protected !!