ಬೆಂಗಳೂರು : ಮೆಜೆಸ್ಟಿಕ್ ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾರ್ಚ್ 21 ರಿಂದ 28 ರವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ಪರೀಕ್ಷಾರ್ಥ ರೈಲು ಸಂಚಾರ ನಡೆಸಲಾಗುತ್ತಿದ್ದು, ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಸಿಗ್ನಲಿಂಗ್ ವ್ಯವಸ್ಥೆ ಮಾರ್ಪಾಡು ಮಾಡುವ ಕಾಮಗಾರಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 21 ರಿಂದ 28 ರವರೆಗೆ ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ರೈಲು ಸಂಚಾರ ಬಂದ್ ಆಗಿರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.