ಸೇನಾ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳಾಗಿ ಮಾಡಲು ಜೋಶಿ ಮನವಿ - BC Suddi
ಸೇನಾ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳಾಗಿ ಮಾಡಲು ಜೋಶಿ ಮನವಿ

ಸೇನಾ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳಾಗಿ ಮಾಡಲು ಜೋಶಿ ಮನವಿ

ಹುಬ್ಬಳ್ಳಿ: ಭೂಸೇನೆಗೆ ಸೇರಿದ ಹಾಗೂ ಭೂಸೇನೆಯ ಇತರ ಏಜೆನ್ಸಿಗಳಿಗೆ ಸೇರಿದ ಎಲ್ಲ ಆಸ್ಪತ್ರೆಗಳನ್ನು ಕೋವಿಡ್ ಕೇರ್ ಆಸ್ಪತ್ರೆಗಳನ್ನಾಗಿಸಲು ಕೇಂದ್ರ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ ಬರೆದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದ ಧಾರವಾಡ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಡಿ.ಆರ್.ಡಿ.ಓ ಅಡಿಯಲ್ಲಿರುವ ಆಸ್ಪತ್ರೆಗಳನ್ನೂ ಕೋವಿಡ್ ಕೇರ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಿ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ರಕ್ಷಣಾ ಸಚಿವಾಲಯ ತತ್ಕ್ಷಣ ಸ್ಪಂದಿಸುತ್ತದೆಂಬ ನಿರೀಕ್ಷೆ ಇದೆ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ‌.