ಜಿ.ಪಂ.-ತಾ.ಪಂ ಚುನಾವಣೆ ಮುಂದೂಡಿಕೆ..! - BC Suddi
ಜಿ.ಪಂ.-ತಾ.ಪಂ ಚುನಾವಣೆ ಮುಂದೂಡಿಕೆ..!

ಜಿ.ಪಂ.-ತಾ.ಪಂ ಚುನಾವಣೆ ಮುಂದೂಡಿಕೆ..!

ಬೆಂಗಳೂರು : ಈಗಾಗಲೇ ಉತ್ತರ ಭಾರತದ ವಿಧಾನಸಭಾ ಚುನಾವಣೆಗಳಿಂದಾಗಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎನ್ನಲಾಗುತ್ತಿದೆ. ಹಾಗೆ ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಜೋರಾಗಿದೆ. ಇಂತಹ ಸಂದರ್ಭದಲ್ಲೇ, ರಾಜ್ಯದಲ್ಲಿ ಮುಂಬರಲಿದ್ದಂತ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳ ಚುನಾವಣೆ ಕೂಡ ಮುಂದೂಡಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಿ.ಪಂ, ತಾ.ಪಂ ಚುನಾವಣೆ ಬರುತ್ತಿವೆ. ಕೋವಿಡ್ ಹೆಚ್ಚಳದಿಂದ ಚುನಾವಣೆ ಬೇಡವೆಂಬ ಸಲಹೆ ಇದೆ. ಹಾಗಾಗಿ ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ನಡೆಸಲಾಗಿದೆ. ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡ್ತೇವೆ ಎಂದರು.