2ನೇ ಡೋಸ್ ಲಸಿಕೆ ಪಡೆದ ಪ್ರಧಾನಿ ಮೋದಿ - BC Suddi
2ನೇ ಡೋಸ್ ಲಸಿಕೆ ಪಡೆದ ಪ್ರಧಾನಿ ಮೋದಿ

2ನೇ ಡೋಸ್ ಲಸಿಕೆ ಪಡೆದ ಪ್ರಧಾನಿ ಮೋದಿ

ನವದೆಹಲಿ : ಡೆಡ್ಲಿ ಸೋಂಕು ಕೊರೊನಾ 2ಡನೇ ಅಲೆ ಅಬ್ಬರ ಜೋರಾಗಿದೆ. ಇದರ ಜೊತೆ ಜೊತೆಗೆನೆ ಲಸಿಕೆ ಅಭಿಯಾನವು ಚುರುಕಾಗಿದೆ.
ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ತಡೆಗೆ ಲಸಿಕೆ ಹಾಕಿಸಿಕೊಳ್ಳಲಾಗುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

2ನೇ ಡೋಸ್ ಲಸಿಕೆ ಹಾಕಿಸಿಕೊಂಡ ಪ್ರಧಾನಿ, ಯಾರೆಲ್ಲ ಲಸಿಕೆ ಪಡೆದುಕೊಳ್ಳಲಿ ಅವರೆಲ್ಲರೂ ಲಸಿಕೆ ಪಡೆದುಕೊಳ್ಳಿ ಎಂದು ಕರೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಇಂದು ಏಮ್ಸ್ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದೇನೆ. ನಮ್ಮಲ್ಲಿರುವ ಕೆಲ ವಿಧಾನಗಳಲ್ಲಿ ಸದ್ಯ ಲಸಿಕೆ ಪಡೆದುಕೊಳ್ಳುವುದೇ ಕೊರೊನಾ ಬರದಂತೆ ತಡೆಗಟ್ಟಲು ಇರುವ ಮಾರ್ಗವಾಗಿದೆ. ಹೀಗಾಗಿ ಯಾರೆಲ್ಲ ಲಸಿಕೆ ಪಡೆದುಕೊಳ್ಳಲು ಅರ್ಹರಿದ್ದೀರೋ ಅವರೆಲ್ಲರೂ ಶೀಘ್ರವೇ ಲಸಿಕೆ ಹಾಕಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಈ ಮೂಲಕ ಎಲ್ಲರೂ ಒಟ್ಟಾಗಿ ನಾವು ಭಾರತವನ್ನು ಕೊರೊನಾ ಮುಕ್ತಗೊಳಿಸೋಣ ಎಂದು ಕರೆ ನೀಡಿದ್ದಾರೆ.

error: Content is protected !!