ಮಸ್ಕಿ ವಿಧಾನಸಭಾ ಉಪ ಚುನಾವಣೆ : 6ನೇ ಸುತ್ತಿನಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರುವಿಹಾಳ್‌ಗೆ ಮುನ್ನಡೆ - BC Suddi
 ಮಸ್ಕಿ ವಿಧಾನಸಭಾ ಉಪ ಚುನಾವಣೆ : 6ನೇ ಸುತ್ತಿನಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರುವಿಹಾಳ್‌ಗೆ ಮುನ್ನಡೆ

 ಮಸ್ಕಿ ವಿಧಾನಸಭಾ ಉಪ ಚುನಾವಣೆ : 6ನೇ ಸುತ್ತಿನಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರುವಿಹಾಳ್‌ಗೆ ಮುನ್ನಡೆ

ಮಸ್ಕಿ: ಮಸ್ಕಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗಿಂತಲೂ 7,155 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಸ್ಕಿ ವಿಧಾನಸಭಾ ಉಪ ಚುನಾವಣೆಯ ಮತೆಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈವರೆಗೆ ಆರನೇ ಸುತ್ತಿನ ಮತಎಣಿಕೆ ಮುಕ್ತಾಯಗೊಂಡಿದ್ದು, ಏಳನೇ ಸುತ್ತಿನ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ವೇಳೆ ಕಾಂಗ್ರಸ್‌ ಅಭ್ಯರ್ಥಿ ಬಸನಗೌಡ ತುರುವಿಹಾಳ್ 7,155 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆರನೇ ಸುತ್ತಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರುವಿಹಾಳ 19,395 ಮತಗಳನ್ನು ಪಡೆದುಕೊಂಡಿದ್ದರ, ಬಿಜೆಪಿ ಅಭ್ಯರ್ಥಿ ಪ್ರತಾಪ್‌‌ ಗೌಡ ಪಾಟೀಲ್‌ ಅವರು 12,240 ಮತಗಳನ್ನು ಪಡೆದುಕೊಂಡಿದ್ದಾರೆ.

ಕೊರೊನಾ ಲಸಿಕೆ: ಮೊದಲ ದಿನ 18–44 ವರ್ಷ ವಯಸ್ಸಿನ 80 ಸಾವಿರ ಜನರಿಗೆ ಮೊದಲ ಡೋಸ್‌