ಆಕ್ಸಿಜನ್ ಕೊರತೆ ಕಾರಣಕ್ಕೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಸಿಎಂ ಗರಂ - BC Suddi
ಆಕ್ಸಿಜನ್ ಕೊರತೆ ಕಾರಣಕ್ಕೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಸಿಎಂ ಗರಂ

ಆಕ್ಸಿಜನ್ ಕೊರತೆ ಕಾರಣಕ್ಕೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಸಿಎಂ ಗರಂ

ಬೆಂಗಳೂರು: ಆಕ್ಸಿಜನ್ ಕೊರತೆ ಕಾರಣಕ್ಕೆ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ದುರಂತ ಸಂಭವಿಸಿದ ಬಳಿಕ ಸಿಎಂ ಯಡಿಯೂರಪ್ಪನವರು ಆರೋಗ್ಯ ಸಚಿವ ಸುಧಾಕರ್ ಅವರನ್ನು ಕರೆದು ಮಾತನಾಡಿದ್ದಾರೆ.

ಈ ವೇಳೆ, ಇದಕ್ಕೆಲ್ಲ ಮೈಸೂರು ಜಿಲ್ಲಾಧಿಕಾರಿಯೇ ನೇರ ಕಾರಣ. ಆಕ್ಸಿಜನ್ ಲಭ್ಯತೆ ಇದ್ದರೂ ಸಕಾಲಕ್ಕೆ ಸರಬರಾಜು ಮಾಡಿಲ್ಲ ಏನ್ ಮಾಡೋದು ಹೇಳಿ. ರೋಹಿಣಿ ಸಿಂಧೂರಿ ವಿರುದ್ಧ ಆರೋಗ್ಯ ಸಚಿವ ಸುಧಾಕರ್ ಸಿಎಂ ಯಡಿಯೂರಪ್ಪ ಮುಂದೆ ಆರೋಪಗಳ ಸುರಿಮಳೆಗೈದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಸಿಎಂ ಯಡಿಯೂರಪ್ಪ ಸಹ ರೋಹಿಣಿ ಸಿಂಧೂರಿ ವಿರುದ್ಧ ಈ ವಿಚಾರದ ಬಗ್ಗೆ ಗರಂ ಆಗಿದ್ದು, ಇಂದೇ ಸಿಂಧೂರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿಗೆ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ: ಬೊಮ್ಮಾಯಿ