ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 62,258 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,19,08,910ಕ್ಕೆ ಏರಿಕೆಯಾಗಿದೆ.

ನಿನ್ನೆಯಿಂದ ಸೋಂಕಿಗೆ 291 ಮಂದಿ ಬಲಿಯಾಗಿದ್ದು, 30,386 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,61,240ರಷ್ಟಾಗಿದರೆ, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 1,12,95,023ರಷ್ಟಿದೆ. ದೇಶದಲ್ಲಿ ಇನ್ನೂ 4,52,647 ಸಕ್ರಿಯ ಪ್ರಕರಣಗಳಿದ್ದು, 5,81,09,773 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.