ನವದೆಹಲಿ: ಪಶ್ಚಿಮ ಬಂಗಾಳ ಹಿಂಸಾಚಾರ: ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ಗೆ ಮನವಿ - BC Suddi
ನವದೆಹಲಿ: ಪಶ್ಚಿಮ ಬಂಗಾಳ ಹಿಂಸಾಚಾರ: ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ಗೆ ಮನವಿ

ನವದೆಹಲಿ: ಪಶ್ಚಿಮ ಬಂಗಾಳ ಹಿಂಸಾಚಾರ: ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ಗೆ ಮನವಿ

ನವದೆಹಲಿ: ವಿಧಾನಸಭಾ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸಂವಿಧಾನಿಕ ಅಂಶಗಳು ಮರೆಯಾಗಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರಲು ಪ್ರಯತ್ನಿಸುವುದರ ಜೊತೆಗೆ ಕೇಂದ್ರದ ಭದ್ರತಾ ಪಡೆಗಳ ನಿಯೋಜನೆ ಬಗ್ಗೆ ವಿಚಾರಣೆ ನಡೆಸುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ಈ ಮನವಿಯನ್ನು ತಮಿಳುನಾಡು ಮೂಲದ ಇಂಡಿಕ್ ಕಲೆಕ್ಟಿವ್ ಟ್ರಸ್ಟ್ ವಕೀಲ ಸುವಿದುತ್ ಎಂ.ಎಸ್ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಭುಗಿಲೆದ್ದಿರುವ ಹಿಂಸಾಚಾರ ಅಲ್ಲಿನ ಸಂವಿಧಾನಿಕ ಅಂಶಗಳ ವೈಫಲ್ಯವನ್ನು ತೋರಿಸುತ್ತಿದೆ. ಇದು ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಅರ್ಜಿದಾರರು ತುರ್ತು ಪರಿಹಾರವನ್ನು ಕೋರಿ ಮನವಿ ಸಲ್ಲಿಸಿದ್ದಾರೆ.

ನೀವು ರಾಜೀನಾಮೆ ಕೇಳುವುದಲ್ಲ, ಸರಕಾರಕ್ಕೆ ಸಲಹೆ ಕೊಡಿ : ಸಂಸದೆ ಶೋಭಾ ಕರಂದ್ಲಾಜೆ