ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಕನ್ನಡಿಗ ಆಯ್ಕೆ - BC Suddi
ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಕನ್ನಡಿಗ ಆಯ್ಕೆ

ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಕನ್ನಡಿಗ ಆಯ್ಕೆ

ವೆಲ್ಲಿಂಗ್ಟನ್: ಬೆಂಗಳೂರು ಮೂಲದ ಆಲ್‌ರೌಂಡರ್ ರಚಿನ್ ರವೀಂದ್ರ ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿ ನ್ಯೂಜಿಲೆಂಡ್ ತಂಡದ ಪರ ರಚಿತ್ ಆಡಲಿದ್ದಾರೆ.

21 ವರ್ಷದ ಆಲ್ರೌಂಡರ್ ರಚಿನ್ ಜೂನ್ 2ರಿಂದ ಆರಂಭವಾಗಲಿರುವ 2 ಟೆಸ್ಟ್ ಪಂದ್ಯಗಳ ಸರಣಿಗೆ 20 ಸದಸ್ಯರ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ರಚಿನ್ ರವೀಂದ್ರ ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಮೂಲತಃ ಬೆಂಗಳೂರಿನವರಾಗಿದ್ದು, ನ್ಯೂಜಿಲೆಂಡ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. 2016ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ 16 ವರ್ಷದ ರಚಿನ್ ರವೀಂದ್ರ ನ್ಯೂಜಿಲೆಂಡ್ ತಂಡ ಪ್ರತಿನಿಧಿಸಿದ್ದರು.

ಸಾಲ ಮಾಡಿ ಲಾಟರಿ ಖರೀದಿಸಿದ್ದ ವಾಚ್​ಮ್ಯಾನ್ ಈಗ ಕೋಟ್ಯಧಿಪತಿ

error: Content is protected !!