Also read
ಬೆಂಗಳೂರು: ರಾಜ್ಯ ಸರ್ಕಾರವು ಜಿ.ಪಂ., ತಾ.ಪಂ. ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, 2027ರ ಜನವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ, ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.