LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಎಂಬ್ರಾಡರಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ.!

ಎಂಬ್ರಾಡರಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ.!

 

 ದಾವಣಗೆರೆ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಆಗಸ್ಟ್ 28 ರಂದು 31 ದಿನಗಳ ಎಂಬ್ರಾಡರಿ, ಸೆಪ್ಟೆಂಬರ್ 15 ರಂದು 10 ದಿನಗಳ ಅಣಬೆ ಕೃಷಿ, ಸೆಪ್ಟೆಂಬರ್  28 ರಿಂದ 13 ದಿನಗಳ ಸಿಸಿಟಿವಿ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.,

   ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.  ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

   ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

  ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9380162042, 9241482541, 9113880324 ಅನ್ನು ಸಂಪರ್ಕಿಸಬಹುದೆಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರಾದ ಗಿರಿಧರ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST