ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆ.18 - ಸೆ. 09 ರವರೆಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.