ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಾಯವಿದ್ದು ಕಾಬುದು ವಿಜ್ಞಾನ,
ಜೀವವಿದ್ದು ಕಾಬುದು ಸುಜ್ಞಾನ,
ಎರಡಳಿದು ತೋರಿಕೆಯಲ್ಲಿ ಕಾಬುದು ಪರಂಜ್ಯೋತಿಜ್ಞಾನ,
ಇಂತೀ ಮೂರು ಮುಖವ ಏಕವ ಮಾಡಿ
ಬೇರೊಂದು ಕಾಬುದು ಪರಮಪ್ರಕಾಶಜ್ಞಾನ.
ಇಂತೀ ಅಂತರ ಪಟಂತರದಲ್ಲಿ ನಿಂದು ನೋಡುವ ಸಂದೇಹವ ಹರಿದ ಸಂದಿನಲ್ಲಿ ಕುಂದದ ಬೆಳಗು ತೋರುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.
-ಅರಿವಿನ ಮಾರಿತಂದೆ