LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ರಕ್ತದಾನದಿಂದ ಶರೀರ ಚೈತನ್ಯದಿಂದ ಕೂಡಿರುತ್ತದೆ -ನ್ಯಾಯಾಧೀಶ ಕೆ.ಜಿ.ಸತೀಶ್

ರಕ್ತದಾನದಿಂದ ಶರೀರ ಚೈತನ್ಯದಿಂದ ಕೂಡಿರುತ್ತದೆ -ನ್ಯಾಯಾಧೀಶ ಕೆ.ಜಿ.ಸತೀಶ್

 

ಚಿತ್ರದುರ್ಗ: ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಎಷ್ಟೇ ಬದಲಾವಣೆಯಾದರೂ ರಕ್ತವನ್ನು ಕಾರ್ಖಾನೆಗಳಲ್ಲಿ ಉತ್ಪಾದಿಸಲು ಸಾಧ್ಯವಿಲ್ಲ ಎಂದು 1ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಕೆ.ಜಿ.ಸತೀಶ ತಿಳಿಸಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಈಚೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆ, ಡಿ.ಜಿ.ಎಂ. ಅಲುಮ್ನಿ ಅಸೋಸಿಯೇಷನ್ ಗದಗ ಅನುಸ್ಕರಣ 2001ನೇ ಬ್ಯಾಚ್, ಸರ್ಕಾರಿ ಕಲಾ ಕಾಲೇಜು, ಅಮೃತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ನ್ಯಾಯಮೂರ್ತಿ ಶಿವರಾಜ ವಿ ಪಾಟೀಲ್ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಮಾಡುವುದರಿಂದ ಶರೀರವು ಚೈತನ್ಯ ಮತ್ತು ಲವಲವಿಕೆಯಿಂದ ಕೂಡಿರುತ್ತದೆ. ಇಂತಹ ರಕ್ತದಾನ ಶಿಬಿರಗಳನ್ನು ನಡೆಸುವುದರಿಂದ ಹಲವರ ಪ್ರಾಣ ಉಳಿಸಲು ಸಾಧ್ಯ ಎಂದರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್. ತಾರಿಣಿ ಶುಭದಾಯಿನಿ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಇಂತಹ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಿಸಿದರೆ ಪ್ರತಿ ಯೂನಿಟ್ ರಕ್ತದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಕಾಲೇಜಿನ ವಿವಿಧ ಘಟಕಗಳು ಹಾಗೂ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶಮೀರ್ ಪಿ. ನಂದ್ಯಾಲ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಯ ಸಭಾಪತಿ ಗಾಯಿತ್ರಿ ಶಿವರಾಂ, ಡಿ.ಜಿ.ಎಂ. ಅಲುಮ್ನಿ ಅಸೋಸಿಯೇಷನ್ ಗದಗದ ಸಹ ಕಾರ್ಯದರ್ಶಿ ಡಾ. ನವೀನ್ ಬಿ. ಸಜ್ಜನ್, ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನದ ಜಿಲ್ಲಾ ಸಂಯೋಜಕಿ ದಿಲ್ ಶಾದ್ ಉನ್ನಿಸಾ, ಸರ್ಕಾರಿ ಕಲಾ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಲೀಲಾವತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ಎಂ.ಕೆ. ಅನಂತ ರೆಡ್ಡಿ, ಚಿತ್ರದುರ್ಗದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಅರುಣ್ ಕುಮಾರ್, ಸರ್ಕಾರಿ ಕಲಾ ಕಾಲೇಜಿನ ಅಧೀಕ್ಷಕ ಹರೀಶ್ ಬಾಬು ರೆಡ್ಡಿ ಹಾಗೂ ಜಿಲ್ಲಾ ಕಾರ್ಯದರ್ಶಿ ಮಜಹರ್ ಉಲ್ಲಾ ಇದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಪ್ರಸಾದ್ ವಿ ಸ್ವಾಗತಿಸಿದರು, ಯುವ ರೆಡ್ ಕ್ರಾಸ್ ಸಂಚಾಲಕ ಡಾ. ಪ್ರದೀಪ್ ಕುಮಾರ್ ನಿರೂಪಿಸಿದರು ಮತ್ತು ಎನ್.ಎಸ್.ಎಸ್. ಘಟಕ-2ರ ಕಾರ್ಯಕ್ರಮಾಧಿಕಾರಿ ಡಾ. ಬಿ.ಕೆ. ಬಸವರಾಜ ವಂದಿಸಿದರು. ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST