LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಂದ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ಯೋಜನೆಯಡಿ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟ್ಯಾಕ್ಸಿ ಹಾಗೂ ಟೈಲರಿಂಗ್ ಉದ್ದೇಶಗಳಿಗಾಗಿ ಕನಿಷ್ಠ ರೂ.1 ಲಕ್ಷ ದಿಂದ ಗರಿಷ್ಠ ರೂ.2 ಲಕ್ಷಗಳವರೆಗೆ ಸಾಲ ನೀಡಲಾಗುತ್ತದೆ. ಒಟ್ಟು ಮೊತ್ತದಲ್ಲಿ ಶೇ. 20 ರಷ್ಟು ಸಬ್ಸಿಡಿ (ಸಹಾಯಧನ) ಲಭ್ಯವಿದ್ದು, ಉಳಿದ ಶೇ.80 ರಷ್ಟು ಸಾಲದ ಮೊತ್ತಕ್ಕೆ ಶೇ. 4 ಬಡ್ಡಿದರದಲ್ಲಿ ಒಟ್ಟು 34 ಕಂತುಗಳಲ್ಲಿ ಮರು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದೊಳಗಿನವರು ಯೋಜನೆಗೆ ಅರ್ಹರಾಗಿದ್ದು, ಶೇ. 33 ರಷ್ಟು ಮಹಿಳೆಯರಿಗೆ ಹಾಗೂ ಶೇ.5 ರಷ್ಟು ವಿಶೇಷ ಚೇತನರಿಗೆ ಮೀಸಲಾತಿ ಇರಲಿದೆ. ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿರುವುದಿಲ್ಲ. ಅರ್ಜಿದಾರರ ಆಧಾರ್ ಸಂಖ್ಯೆಯು ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಮತ್ತು ಸಾಲದ ಉದ್ದೇಶವನ್ನು ಅರ್ಜಿಯಲ್ಲಿ ಕನಿಷ್ಠ 10 ಪದಗಳಿಗಿಂತ ಕಡಿಮೆಯಿಲ್ಲದಂತೆ ಸ್ಪಷ್ಟವಾಗಿ ನಮೂದಿಸಬೇಕು.

ಆಸಕ್ತರು ಮಂಡಳಿಯ ವೆಬ್ಸೈಟ್ www.ksbdb.karnataka.gov.in  ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆಗಸ್ಟ್ 31, 2026 ಸಂಜೆ 5.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8762249230 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನಪವಾಡಸದೃಶ್ಯ ಸತ್ತ ಮಹಿಳೆ ರಸ್ತೆಗುಂಡಿಯ ಜರಕ್ ನಿಂದ ಬದುಕಿದ ಸುದ್ದಿ.!ಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ. ರಾಜ್ಯದ ವಿವಿಧೆಡೆ ಭಾರಿ ಮಳೆ :  ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-07-2026ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ-ರಾಯಸದ ಮಂಚಣ್ಣ ಅವರ ವಚನಎಕ್ಕದ ಗಿಡದ ಹೂವಿನಿಂದ ನೀವು ಇಷ್ಟ ಪಟ್ಟವರ ವಶ.!4.15ರ ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ.! ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಹಾಕದವರಿಗೆ ಇಲ್ಲಿದೆ ಸುದ್ದಿ.! ದಿನಾಂಕ ಮುಂದೂಡಿಕೆ