LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನಾಳೆ ಸೆ.24ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ನಾಳೆ ಸೆ.24ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

 

ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದೇ ಸೆಪ್ಟೆಂಬರ್ 24ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಅಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಆಗಮಿಸಿ, ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ್ ಶಿವಾಚಾರ್ಯ ಮಹಾಸ್ವಾಮಿಗಳವರ 35ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ಮಧ್ಯಾಹ್ನ 1ಕ್ಕೆ ಸಿರಿಗೆರೆಯಿಂದ ಹೊರಟು ಮಧ್ಯಾಹ್ನ 1.15ಕ್ಕೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮಕ್ಕೆ ಆಗಮಿಸಿ, ಜಲಸಂಪನ್ಮೂಲ ಇಲಾಖೆ, ವಿಶ್ವೇಶ್ವರಯ್ಯ ಜಲನಿಗಮ ವತಿಯಿಂದ ಆಯೋಜಿಸಿರುವ ಭದ್ರಾ ಮೇಲ್ದಂಡೆ ಯೋಜನೆಯಿಂದ ಬಯಲು ಸೀಮೆಗೆ ನೀರು ಹರಿಸುವ ಪ್ರಯುಕ್ತ ಗಂಗಾಪೂಜೆ/ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.45ಕ್ಕೆ ಗೋನೂರು ಗ್ರಾಮದಿಂದ ಹೊರಟು, ಮಧ್ಯಾಹ್ನ 1.55ಕ್ಕೆ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದ ಜ್ಯೂನಿಯರ್ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30ಕ್ಕೆ ತುರುವನೂರು ಗ್ರಾಮಕ್ಕೆ ಆಗಮಿಸಿ, ಜ್ಯೂನಿಯರ್ ಕಾಲೇಜು ಕಟ್ಟಡ, 2 ಕಿ.ಮೀ ಉದ್ದದ ಸಿಟಿಎಂ ರಾಜ್ಯ ರಸ್ತೆ, ಮಹಾತ್ಮ ಗಾಂಧಿ ಪಾರ್ಕ್, ವಾಲ್ಮೀಕಿ ಭವನ, ಕನಕ ಭವನ ಕಟ್ಟಡ, ಬಾಲಕ-ಬಾಲಕಿಯರ, ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ, ಪ್ರಥಮ ದರ್ಜೆ ಕಾಲೇಜು ಕಟ್ಟಡ, ಇಂದಿರಾ ಗಾಂಧಿ ವಸತಿ ಶಾಲಾ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30ಕ್ಕೆ ತುರುವನೂರು ಗ್ರಾಮದಿಂದ ಹೊರಟು 3.50ಕ್ಕೆ ಚಿತ್ರದುರ್ಗ ನಗರದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5ಕ್ಕೆ ಮುರುಘಾ ಮಠ ಆವರಣದ ಹೆಲಿಪ್ಯಾಡ್ನಿಂದ ಬೆಂಗಳೂರಿನ ಹೆಚ್ಎಎಲ್  ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶತ್ರು ಸಂಹಾರಕ್ಕೆ ಬಲಿಷ್ಠ ತಾಂತ್ರಿಕ ತಂತ್ರ ಲಿಂಬೆಹಣ್ಣಿನ ಸಹಾಯದಿಂದ ನಿಮ್ಮ ಶತ್ರುವನ್ನು ಸರ್ವನಾಶ ಮಾಡಬಹುದು!ಶತ್ರು ಸಂಹಾರಕ್ಕೆ ಬಲಿಷ್ಠ ತಾಂತ್ರಿಕ ತಂತ್ರ ಲಿಂಬೆಹಣ್ಣಿನ ಸಹಾಯದಿಂದ ನಿಮ್ಮ ಶತ್ರುವನ್ನು ಸರ್ವನಾಶ ಮಾಡಬಹುದು!ಈ ಕಾರಣಕ್ಕೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ.!ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ :ಕರಿಕೆರೆ ಗ್ರಾಮದಲ್ಲಿ ಸುಮಾರು ಹತ್ತು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ: ಪ್ರತಿಭಟನೆ.!ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ.ನಾಳೆ ಸೆ.24ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ-ಅರಿವಿನ ಮಾರಿತಂದೆ ಅವರ ವಚನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 22-09-2026ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ