ಚಿತ್ರದುರ್ಗ: ತಾಲ್ಲೂಕು ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ನೇಮಕಾತಿಗೆ ಅರ್ಜಿ ಆಹ್ವಾನ.!
ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವತಿಯಿಂದ ತಾಲ್ಲೂಕು ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆ.ಎಂ.ಆರ್.ಸಿ) ಅನುದಾನದಡಿ ಒಂದು ವರ್ಷದ ಅವಧಿಗೆ ಈ ನೇಮಕಾತಿ ನಡೆಯಲಿದೆ. ಮೆರಿಟ್ ಕಂ ರೋಸ್ಟರ್ ಹಾಗೂ ರೋಲಿಂಗ್ ಪ್ರಕ್ರಿಯೆಯ ಆಧಾರದ ಮೇಲೆ 2 ಮನೋರೋಗ ತಜ್ಞರು (ಸೈಕಿಯಾಟ್ರಿಸ್ಟ್) ಮತ್ತು 2 ಸೈಕಾಲಜಿಸ್ಟ್ (ಕ್ಲಿನಿಕಲ್ ಸೈಕಾಲಜಿಸ್ಟ್ / ಸೈಕಾಲಜಿಸ್ಟ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಯ ದೃಢೀಕೃತ ದಾಖಲೆಗಳೊಂದಿಗೆ 2026ರ ನವೆಂಬರ್ 21 ರಿಂದ ಡಿಸೆಂಬರ್ 5ರ ಸಂಜೆ 4.30ರೊಳಗೆ ಕಚೇರಿಗೆ ಬಂದು ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರ ಷರತ್ತುಗಳ ಮಾಹಿತಿಯನ್ನು https://nhm.karnataka.gov.in ಜಾಲತಾಣದಲ್ಲಿ ಪಡೆಯಬಹುದು.
ಹೆಚ್ಚಿನ ವಿವರಗಳಿಗೆ ಕಚೇರಿ ಅವಧಿಯಲ್ಲಿ (ರಜಾದಿನಗಳನ್ನು ಹೊರತುಪಡಿಸಿ) 8971552887 ಅಥವಾ 9611783297 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.