LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗ: ಅ.31 ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ

ಚಿತ್ರದುರ್ಗ: ಅ.31 ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ

 

ಚಿತ್ರದುರ್ಗ: ಬೆಂಗಳೂರು ನೇಮಕಾತಿ ಕಚೇರಿ (ಮುಖ್ಯ ಕಚೇರಿ) ಹಾಗೂ ಚಿತ್ರದುರ್ಗ ಜಿಲ್ಲಾಡಳಿತ ವತಿಯಿಂದ ಇದೇ ಅಕ್ಟೋಬರ್ 31 ರಿಂದ ನವೆಂಬರ್ 03 ರವರೆಗೆ ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

ಈ ರ್ಯಾಲಿಯಲ್ಲಿ ಜೂನ್ 01 ರಿಂದ 12 ರವರೆಗೆ ನಡೆದ ಆನ್‍ಲೈನ್ ಸಾಮಾನ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ಸಾಮಾನ್ಯ ಕರ್ತವ್ಯ, ಅಗ್ನಿವೀರ ತಾಂತ್ರಿಕ, ಅಗ್ನಿವೀರ್ ಟ್ರೇಡ್ಸ್‍ಮನ್ ವರ್ಗಗಳ ಹುದ್ದೆಗಳಿಗೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ಬೆಂಗಳೂರು (ದಕ್ಷಿಣ), ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಂದ ಇದೇ ಅಕ್ಟೋಬರ್ 31ರಂದು 543 ಅಭ್ಯರ್ಥಿಗಳು ಹಾಗೂ ನವೆಂಬರ್ 01ರಂದು 414 ಅಭ್ಯರ್ಥಿಗಳು ಒಟ್ಟು 957 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.

ಅಗ್ನಿವೀರ ನೇಮಕಾತಿ ರ್ಯಾಲಿಗಾಗಿ ಈಗಾಗಲೇ ಜಿಲ್ಲಾಡಳಿತದಿಂದ ಕ್ರೀಡಾಂಗಣ ವ್ಯವಸ್ಥೆ, ವೈದ್ಯಕೀಯ ಪರೀಕ್ಷೆ, ಕುಡಿಯುವ ನೀರಿನ ವ್ಯವಸ್ಥೆ, ಊಟ ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿರುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದ್ದು, ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ, ದೈಹಿಕ ಸಾಮಥ್ರ್ಯ ಪರೀಕ್ಷೆ ಹಾಗೂ ಅಂತಿಮ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮತ್ತು ಆನ್‍ಲೈನ್ ನೇಮಕಾತಿ ರ್ಯಾಲಿಯ ವೇಳೆ ನಡೆಸುವ ಪರೀಕ್ಷೆಗಳು ಮತ್ತು ಅಂತಿಮ ಅರ್ಹತಾ ಪಟ್ಟಿಯಲ್ಲಿ ಅಭ್ಯರ್ಥಿಗಳು ತೋರಿಸುವ ಸಾಧನೆಯ ಆಧಾರದ ಮೇಲೆಯೇ ಆಯ್ಕೆ ನಡೆಯುತ್ತದೆ.

ರ್ಯಾಲಿಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕಾಗುತ್ತದೆ.

ಅಭ್ಯರ್ಥಿಗಳು ಯಾವುದೇ ದಲ್ಲಾಳಿಗಳು ಅಥವಾ ಮದ್ಯವರ್ತಿಗಳ ಆಮಿಷಕ್ಕೆ ಒಳಗಾಗಬಾರದು. ಅಧಿಕೃತ ಸೇನಾ ನೇಮಕಾತಿ ಜಾಲತಾಣದಲ್ಲಿ joinindianarmy.nic.in  ಪ್ರಕಟವಾಗುವ ಮಾಹಿತಿಯನ್ನು ಮಾತ್ರ ಆಧರಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೇನಾ ನೇಮಕಾತಿ ಅಧಿಕಾರಿಗಳು ಸ್ಪಷ್ಟವಾಗಿ ನಿರ್ದೇಶಿಸಿರುತ್ತಾರೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದ್ದಾರೆ.

(AI ಚಿತ್ರ)

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST